ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ದೇಶದಲ್ಲಿ ನಡೆಯುವ ಚುನಾವಣೆಯಿಂದ ಸೋಂಕಿತರು ಹೊರಗುಳಿಯದಂತೆ ತಡೆಯಲು ಕೇಂದ್ರ ಚುನಾವಣಾ ಆಯೋಗ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ.
65 ವರ್ಷ ಮೇಲ್ಪಟ್ಟ ಮತದಾರರು ಹಾಗೂ ಕೊರೊನಾ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳು ಇದೀಗ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮನೆ ಅಥವಾ ಆಸ್ಪತ್ರೆಯಿಂದ ವೋಟಿಂಗ್ ಮಾಡುವ ಅವಕಾಶ ಪಡೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಪ್ರಕಟಣೆ ಹೊರಹಾಕಿದೆ.
ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಬಿಹಾರ ಚುನಾವಣೆ ನಡೆಯಲಿದ್ದು,ಕೆಲವೊಂದು ಪ್ರದೇಶಗಳಲ್ಲಿ ಉಪಚುನಾವಣೆ ಸಹ ನಡೆಯಲಿದ್ದು, ಅದಕ್ಕಾಗಿ ಈ ಅವಕಾಶ ನೀಡಲಾಗಿದೆ. ಇಷ್ಟು ದಿನ 80+ ವಯಸ್ಸು ಆದವರಿಗೆ ಮಾತ್ರ ಅಂಚೆ ಮತದಾನದ ಅವಕಾಶ ನೀಡಲಾಗಿತು. ಆದರೆ ಇದೀಗ 65+ ವಯಸ್ಸಾದವರು, ಕೊರೊನಾ ವೈರಸ್ನಿಂದ ಬಳಲುತ್ತಿರುವವರು, ಗರ್ಭಿಣಿಯರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಈ ಅವಕಾಶ ನೀಡಲಾಗಿದೆ.
ಕೊರೊನಾ ವೈರಸ್ನಿಂದ ವೃದ್ಧರನ್ನ ದೂರ ಇಡುವ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಿದ್ದು, ಕೇಂದ್ರ ಚುನಾವಣಾ ಆಯೋಗದ ವಕ್ತಾರ ಶೈಪಾಲಿ ಟ್ವೀಟ್ ಕೂಡ ಮಾಡಿದ್ದಾರೆ.