ಕರ್ನಾಟಕ

karnataka

ETV Bharat / bharat

ಯುವ ನೇತಾರ ಆದಿತ್ಯ ಠಾಕ್ರೆ ಮುಂದಿನ ಸಿಎಂ.. ಮಹಾರಾಷ್ಟ್ರದಲ್ಲಿ ರಾರಾಜಿಸುತ್ತಿವೆ ಪೋಸ್ಟರ್​!

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಕನ್ಫರ್ಮ್ ಆಗಿದ್ದು, ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಬೆನ್ನಲ್ಲೇ ಯುವ ನೇತಾರ ಮುಂದಿನ ಸಿಎಂ ಎಂಬ ಪೋಸ್ಟರ್​ ರಾರಾಜಿಸುತ್ತಿವೆ.

ಆದಿತ್ಯ ಠಾಕ್ರೆ ಮುಂದಿನ ಸಿಎಂ

By

Published : Oct 25, 2019, 8:02 PM IST

Updated : Oct 25, 2019, 10:37 PM IST

ಮುಂಬೈ:288 ಕ್ಷೇತ್ರದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ 161 ಕ್ಷೇತ್ರಗಳಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಜಯ ಸಾಧಿಸಿದ್ದು, ಈಗಾಗಲೇ ಅಧಿಕಾರದ ಚುಕ್ಕಾಣಿ ಹಿಡಿಯಲು ಕಸರತ್ತು ನಡೆದಿದ್ದು, 50:50 ಸೂತ್ರದ ಅಳವಡಿಕೆಗೆ ಶಿವಸೇನೆ ಬಿಗಿ ಪಟ್ಟು ಹಿಡಿದಿದೆ.

ಈ ಮಧ್ಯೆ ಇದೇ ಮೊದಲ ಸಲ ಠಾಕ್ರೆ ಕುಟುಂಬದಿಂದ ಚುನಾವಣಾ ಕಣಕ್ಕಿಳಿದಿದ್ದ 29 ವರ್ಷದ ಆದಿತ್ಯ ಠಾಕ್ರೆ ವರ್ಲಿಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿದ್ದು, ಅವರೇ ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಎಂಬ ಪೋಸ್ಟರ್​ ಇದೀಗ ರಾರಾಜಿಸುತ್ತಿವೆ.

ಆದಿತ್ಯ ಠಾಕ್ರೆ ಮುಂದಿನ ಸಿಎಂ?

ವರ್ಲಿ ಕ್ಷೇತ್ರದಲ್ಲಿ ಪೋಸ್ಟರ್​​ವೊಂದು ರಾರಾಜಿಸುತ್ತಿದ್ದು, ಅದರಲ್ಲಿ ಶಿವಸೇನಾ ಸ್ಥಾಪಕ ಬಾಳ್ ಠಾಕ್ರೆ, ಅಧ್ಯಕ್ಷ ಉದ್ಧವ್ ಠಾಕ್ರೆ ಫೋಟೋ ಜತೆ ಆದಿತ್ಯ ಠಾಕ್ರೆ ಮುಂದಿನ ಮುಖ್ಯಮಂತ್ರಿ ಎಂದು ಬರೆಯಲಾಗಿದೆ.

ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಎನ್​​ಸಿಪಿ ಸುರೇಶ್ ಮಾನೆ ವಿರುದ್ಧ ಭರ್ಜರಿ 70 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲು ಮಾಡಿರುವ ಆದಿತ್ಯ ಠಾಕ್ರೆ ಮೊದಲ ಪ್ರಯತ್ನದಲ್ಲಿಯೇ ಜಯ ಸಾಧಿಸಿದ್ದಾರೆ. ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104, ಶಿವಸೇನೆ 56, ಎನ್​ಸಿಪಿ 54 ಹಾಗೂ ಕಾಂಗ್ರೆಸ್​ 43 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

Last Updated : Oct 25, 2019, 10:37 PM IST

ABOUT THE AUTHOR

...view details