ಶ್ರೀನಗರ (ಜಮ್ಮು-ಕಾಶ್ಮೀರ):ಇಂದಿನಿಂದ ಜಮ್ಮು-ಕಾಶ್ಮೀರದಲ್ಲಿ ಪೋಸ್ಟ್ ಪೇಯ್ಡ್ ಮೊಬೈಲ್ ಸೇವೆಗಳು ಪುನರಾರಂಭಗೊಳ್ಳಲಿವೆ ಎಂದು ಅಲ್ಲಿನ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಯಿಂದ ಎಲ್ಲಾ ಪೋಸ್ಟ್ ಪೇಯ್ಡ್ ಮೊಬೈಲ್ ಫೋನ್ಗಳು ಕಾರ್ಯನಿರ್ವಹಿಸಲಿವೆ. ಆದರೆ ಇಂಟರ್ನೆಟ್ ಬಳಕೆಗೆ ಇನ್ನಷ್ಟು ಸಮಯ ಕಾಯಬೇಕಿದೆ. ಕಾಶ್ಮೀರದಲ್ಲಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಮೊಬೈಲ್ ಫೋನ್ ಸೇವೆ ಪುನಃ ಆರಂಭಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.