ನವದೆಹಲಿ: ವಂಚಿತ್ ಬಹುಜನ ಆಗಾಧಿ (VBA) ಮುಖ್ಯಸ್ಥ ಹಾಗೂ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್, ತಮ್ಮ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಿಬಿಎ ಹಾಗೂ ಕಾಂಗ್ರೆಸ್ ಒಗ್ಗೂಡಿ ಸ್ಪರ್ಧಿಸುತ್ತಿಲ್ಲ. ನಮ್ಮ ಪಕ್ಷ ಮಹಾರಾಷ್ಟ್ರದ 48 ಸ್ಥಾನಗಳಲ್ಲಿಯೂ ಸ್ಫರ್ಧಿಸಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಭಾರಿಪ್ ಮಹುಜನ್ ಮಹಾಸಂಘ, ಎಐಎಂಐಎಂ ಹಾಗೂ ಜೆಡಿಎಸ್ನೊಂದಿಗೆ ಒಕ್ಕೂಟ ರಚಿಸಿಕೊಂಡು, ಕಣಕ್ಕಿಳಿಯಲಿದೆ ಎಂದು ಹೇಳಿದರು.