ಕರ್ನಾಟಕ

karnataka

ETV Bharat / bharat

ನನ್ನ ತಂದೆ ಹೋರಾಟಗಾರ, ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ: ಅಭಿಜಿತ್​ ಮುಖರ್ಜಿ

ನಮ್ಮ ತಂದೆಯ ಆರೋಗ್ಯ ಸ್ಥಿರವಾಗಿದೆ. ಅವರೊಬ್ಬ ಹೋರಾಟಗಾರ. ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ನಿಮ್ಮ ಹಾರೈಕೆಯನ್ನು ಮುಂದುವರೆಸಿ ಎಂದು ಪ್ರಣಬ್​ ಮುಖರ್ಜಿ ಪುತ್ರ ಅಭಿಜಿತ್​ ಮುಖರ್ಜಿ ಮನವಿ ಮಾಡಿದ್ದಾರೆ.

Pranab Mukharjee
ಪ್ರಣಬ್​ ಮುಖರ್ಜಿ

By

Published : Aug 13, 2020, 4:46 PM IST

ನವದೆಹಲಿ:ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೇನೆಯ ರಿಸರ್ಚ್ ಆ್ಯಂಡ್ ರೆಫರೆಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಅವರ ಪುತ್ರ ಹೇಳುವಂತೆ, ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದದಿಂದ ನಮ್ಮ ತಂದೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹಾಗೆಯೇ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶೀಘ್ರ ಚೇತರಿಕೆಗಾಗಿ ನಿಮ್ಮ ಹಾರೈಕೆಗಳನ್ನು ಮುಂದುವರಿಸುವಂತೆ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದುಅಭಿಜಿತ್​ ಮುಖರ್ಜಿ ಟ್ವೀಟ್​ ಮಾಡಿದ್ದಾರೆ.

ಮಿದುಳಿನಲ್ಲಿ ಹೆಪ್ಪುಗಟ್ಟಿದ ರಕ್ತ ತೆಗೆಯಲು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಶಸ್ತ್ರಚಿಕಿತ್ಸೆಗೂ ಮುನ್ನ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಕೋವಿಡ್‌-19 ಸೋಂಕು ಅವರಿಗೆ ತಗುಲಿರುವುದು ದೃಢಪಟ್ಟಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಣಬ್​ ಮುಖರ್ಜಿ ಅವರು ವಿಧಿವಶರಾಗಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ಈ ಬೆಳವಣಿಗೆಗಳಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಭಿಜಿತ್​ ಮುಖರ್ಜಿ, ಅಪ್ಪ ಇನ್ನೂ ಬದುಕಿದ್ದಾರೆ. ಊಹಾಪೋಹದ ಸುದ್ದಿಗಳನ್ನು ಸುಖಾಸುಮ್ಮನೆ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದರು.

ABOUT THE AUTHOR

...view details