ನವದೆಹಲಿ:ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರದ ಹಿನ್ನಲೆಯಲ್ಲಿ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಅಭಿಜಿತ್ ಮುಖರ್ಜಿ ಖಚಿತಪಡಿಸಿದ್ದಾರೆ.

ಪ್ರಣಬ್ ಅವರನ್ನು ಚಿಕಿತ್ಸೆಗಾಗಿ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ವೈರಸ್ ಪಾಸಿಟಿವ್ ಎಂಬುದು ಬಳಿಕ ಗೊತ್ತಾಗಿತ್ತು. ಮುಖರ್ಜಿ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.
ಬಾರವಾದ ಹೃದಯದಿಂದ ನನ್ನ ತಂದೆ ಪ್ರಣಬ್ ಮುಖರ್ಜಿ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇನೆ. ಆರ್ಆರ್ ಆಸ್ಪತ್ರೆಯ ವೈದ್ಯರ ಅತ್ಯುತ್ತಮ ಪ್ರಯತ್ನ ಮತ್ತು ಭಾರತದಾದ್ಯಂತದ ಜನರ ಪ್ರಾರ್ಥನೆ ಕೈಗೂಡಲಿಲ್ಲ. ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದು ಪುತ್ರ ಅಭಿಜಿತ್ ಮುಖರ್ಜಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.