ನವದೆಹಲಿ:ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ವಲ್ಪ ಚೇತರಿಸಿಕೊಂಡಿದ್ದು, ಸ್ಥಿರವಾಗಿದೆ ಎಂದು ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ.
ಆಗಸ್ಟ್ 10ರಂದು ಮೆದುಳಿನ ಸರ್ಜರಿಗೆ ಒಳಗಾಗಿದ್ದ ಪ್ರಣಬ್ ಮುಖರ್ಜಿ ಅವರ ಆರೋ್ಗ್ಯ ಸ್ಥಿತಿ ತುಂಬಾ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದು, ಅವರ ಆರೋಗ್ಯ ಸ್ಥಿತಿಯಲ್ಲಿ ಅಲ್ಪ ಸುಧಾರಣೆ ಕಂಡಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅಭಿಜಿತ್ ಮಾಹಿತಿ ನೀಡಿದ್ದಾರೆ.