ನವದೆಹಲಿ:ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಗಂಭೀರವಾಗಿದ್ದು, ಮೆದುಳಿನ ಸರ್ಜರಿ ಬಳಿಕ ಮತ್ತಷ್ಟು ಹದಗೆಟ್ಟಿದೆ. ಇದರ ಬೆನ್ನಲ್ಲೇ ಪ್ರಣಬ್ ಮುಖರ್ಜಿ ಅವರ ಪುತ್ರಿ ಹಾಗೂ ಕಾಂಗ್ರೆಸ್ ನಾಯಕಿ ಶರ್ಮಿಷ್ಠಾ ಮುಖರ್ಜಿ ತಮ್ಮ ಟ್ವಿಟರ್ ಖಾತೆಯಲ್ಲಿ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರಿಯಿಂದ ಭಾವನಾತ್ಮಕ ಟ್ವೀಟ್ - ಭಾರತ ರತ್ನ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಪುತ್ರಿ ಹಾಗೂ ಕಾಂಗ್ರೆಸ್ ನಾಯಕಿ ಶರ್ಮಿಷ್ಠಾ ಮುಖರ್ಜಿ ತಮ್ಮ ಟ್ವಿಟರ್ ಖಾತೆಯಲ್ಲಿ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.
ಹಿಂದಿನ ವರ್ಷ ಆಗಸ್ಟ್ 8 ನನಗೆ ಅತ್ಯಂತ ಸಂತೋಷದ ದಿನವಾಗಿತ್ತು. ಅಂದು ನನ್ನ ತಂದೆ ಭಾರತ ರತ್ನ ಪುರಸ್ಕಾರ ಪಡೆದಿದ್ದರು. ಇದಕ್ಕೆ ಸರಿಯಾಗಿ ಒಂದು ವರ್ಷದ ನಂತರ ಆಗಸ್ಟ್ 10ರಂದು ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಸಂತೋಷ ಹಾಗೂ ದುಃಖ ಎರಡನ್ನೂ ಭರಿಸುವ ಶಕ್ತಿಯನ್ನು ದೇವರು ನನಗೆ ನೀಡಲಿ. ಎಲ್ಲರ ಕಾಳಜಿಗೆ ತುಂಬಾ ಧನ್ಯವಾದಗಳು ಎಂದು ಶರ್ಮಿಷ್ಠಾ ಮುಖರ್ಜಿ ಟ್ವೀಟ್ ಮಾಡಿದ್ದಾರೆ.
ಈಗ ಸದ್ಯಕ್ಕೆ ಪ್ರಣಬ್ ಮುಖರ್ಜಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಅಳವಡಿಸಿ ದೆಹಲಿಯ ಆರ್ಮಿ ರಿಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 84 ವರ್ಷ ಇವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಕೆಲವು ದಿನಗಳ ಹಿಂದೆ ಅವರಿಗೆ ಮೆದುಳಿನ ಸರ್ಜರಿ ಮಾಡಲಾಗಿತ್ತು.