ಪಶ್ಚಿಮ ಗೋದಾವರಿ (ಆಂಧ್ರಪ್ರದೇಶ): ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಾದ ಗರ್ಭಿಣಿಯೊಬ್ಬರು ಹಲ್ಲುಜ್ಜುವ ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಪರಿಣಾಮ ಸಾವನ್ನಪ್ಪಿದ ದಾರುಣ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಗರ್ಭಿಣಿ: ತಾಯಿ, ಮಗು ದಾರುಣ ಸಾವು - ಗರ್ಭಿಣಿ, ಮಗು ಸಾವು
ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ದೆಂದೂಲೂರು ಮಂಡಲದ ಗಾಲಾಯಗೂಡಂ ಎಂಬಲ್ಲಿ ಈ ಘಟನೆ ನಡೆದಿದ್ದು, ಮೌನಿಕ ಎಂಬಾಕೆ ಮೃತಪಟ್ಟ ಗರ್ಭಿಣಿಯಾಗಿದ್ದಾಳೆ. ಈಕೆ ಕೃಷ್ಣಾ ಜಿಲ್ಲೆಯ ಜಂಗನ್ನಗೂಡಾ ಗ್ರಾಮಕ್ಕೆ ಸೇರಿದ ಮಹಿಳೆಯಾಗಿದ್ದು, ಗಾಲಾಯಗೂಡಂನ ನಾಗರಾಜು ಎಂಬಾತನ್ನು ಒಂದು ವರ್ಷದ ಹಿಂದೆ ವಿವಾಹವಾಗಿದ್ದಳು. ಕೆಲವೇ ದಿನಗಳಲ್ಲಿ ಆಕೆ ಮಗುವಿಗೆ ಜನ್ಮ ನೀಡಬೇಕಾಗಿತ್ತು.
ಇದೇ ತಿಂಗಳ 5ರಂದು ಹಲ್ಲುಜ್ಜುವ ಪೇಸ್ಟ್ ಎಂದು ಭಾವಿಸಿ, ಇಲಿ ಪಾಷಾಣದಿಂದ ಹಲ್ಲುಜ್ಜಿ ಅಸ್ವಸ್ಥಳಾಗಿದ್ದ ಮಹಿಳೆ ಏಲೂರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ.