ನವದೆಹಲಿ:ಪ್ರತಿ ಗರ್ಭಿಣಿಯರು ಹೆರಿಗೆಗಾಗಿ ಆಸ್ಪತ್ರೆಗೆ ಹೋದಾಗ ಕೊರೊನಾ ತಪಾಸಣೆ ಮಾಡುವುದು ಅನಿವಾರ್ಯವಲ್ಲ ಎಂದು ದೆಹಲಿ ಸರ್ಕಾರ ಹೇಳಿದೆ. ಈ ಮಾಹಿತಿಯನ್ನು ದೆಹಲಿ ಸರ್ಕಾರ ಇಂದು ದೆಹಲಿ ಹೈಕೋರ್ಟ್‌ಗೆ ನೀಡಿದೆ.
ಕಳೆದ ವಿಚಾರಣೆ ಸಮಯದಲ್ಲಿ, ಗರ್ಭಿಣಿಯರು ಹೆರಿಗೆಗಾಗಿ ಆಸ್ಪತ್ರೆಗೆ ಹೋದಾಗ ಕೊರೊನಾ ಪರೀಕ್ಷೆಗೆ ಒಳಗಾಗಬೇಕೇ ಎಂಬ ಬಗ್ಗೆ ಸ್ಪಷ್ಟ ಉತ್ತರ ನೀಡುವಂತೆ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ನಾವು ರೋಗಲಕ್ಷಣಗಳಿರುವ ಗರ್ಭಿಣಿಯರ ಬಗ್ಗೆ ಮಾತನಾಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಬದಲಿಗೆ ಎಲ್ಲ ಗರ್ಭಿಣಿಯರು ಚಿಕಿತ್ಸೆ ಪಡೆಯಬೇಕು ಎಂದು ನಾವು ಬಯಸುತ್ತೇವೆ. ಹೆರಿಗೆಯಾಗಬೇಕಾದ ಮಹಿಳೆ ಐದು - ಆರು ದಿನಗಳವರೆಗೆ ಪರೀಕ್ಷೆಯ ಫಲಿತಾಂಶಗಳಿಗಾಗಿ ಕಾಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಆಸ್ಪತ್ರೆಗಳಲ್ಲಿ ಕ್ಷಿಪ್ರ ಆಂಟಿಜೆನ್ ಪರೀಕ್ಷೆಯ ಬಳಕೆಯ ವ್ಯಾಪ್ತಿಯನ್ನು ಹೆಚ್ಚಿಸಬೇಕು ಎಂದು ದೆಹಲಿ ಸರ್ಕಾರ ಹೇಳಿದೆ. ಇದರಿಂದಾಗಿ ಗರ್ಭಿಣಿಯರು ಸೇರಿದಂತೆ ಇತರ ರೋಗಿಗಳ ಚಿಕಿತ್ಸೆಗೆ ಮೊದಲು ಕೊರೊನಾ ಪರೀಕ್ಷೆಯಲ್ಲಿ ಹೆಚ್ಚು ಸಮಯ ವ್ಯರ್ಥವಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.