ಕರ್ನಾಟಕ

karnataka

ETV Bharat / bharat

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಸಮಾವೇಶ: ನಾಳೆ ಪ್ರಧಾನಿ-ರಾಷ್ಟ್ರಪತಿ ಮಾತು

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯ ಸೋಮವಾರ ರಾಜ್ಯಪಾಲರ ಸಮಾವೇಶವನ್ನು ಆಯೋಜಿಸಿದೆ. ಸಮಾವೇಶದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.

President Kovind, PM Modi
ಪ್ರಧಾನಿ-ರಾಷ್ಟ್ರಪತಿ

By

Published : Sep 6, 2020, 1:34 PM IST

ನವದೆಹಲಿ:ಸೋಮವಾರ ನಡೆಯಲಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಕುರಿತ ರಾಜ್ಯಪಾಲರ ಸಮಾವೇಶದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.

"ಉನ್ನತ ಶಿಕ್ಷಣದ ಪರಿವರ್ತನೆಯಲ್ಲಿ ಎನ್ಇಪಿ -2020 ರ ಪಾತ್ರ" ಎಂಬ ವಿಚಾರದ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯ ಸಮಾವೇಶವನ್ನು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು, ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

'ಎನ್ಇಪಿ -2020' - ಇದು 1986 ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದ 34 ವರ್ಷಗಳ ಬಳಿಕ ಘೋಷಣೆಯಾಗಿರುವ 21ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತವನ್ನು ಜಾಗತಿಕ ಸೂಪರ್ ಪವರ್ ಆಗಿ ಪರಿವರ್ತಿಸಲು ಬೇಕಾಗಿರುವ ದೇಶದ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುತ್ತದೆ. ಶಾಲಾ ಮತ್ತು ಉನ್ನತ ಶಿಕ್ಷಣ ಮಟ್ಟದಲ್ಲಿ ಪ್ರಮುಖ ಸುಧಾರಣೆಗಳನ್ನು ತರಲು ಎನ್ಇಪಿಯನ್ನು ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details