ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು, ಸುಪ್ರಿಂಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಕುರಿತಾಗಿ ಕೇಂದ್ರ ಸರ್ಕಾರ ಇಂದು ಅಧಿಸೂಚನೆಯನ್ನು ಹೊರಡಿಸಿದೆ.
ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು, ಸುಪ್ರಿಂಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಕುರಿತಾಗಿ ಕೇಂದ್ರ ಸರ್ಕಾರ ಇಂದು ಅಧಿಸೂಚನೆಯನ್ನು ಹೊರಡಿಸಿದೆ.
2019 ನವೆಂಬರ್ 17ರಂದು ನಿವೃತ್ತರಾದ ಇವರು, ರಾಜಕೀಯ ಮತ್ತು ಧಾರ್ಮಿಕವಾಗಿ ಸೂಕ್ಷ್ಮವಾದ ಅಯೋಧ್ಯಾ ಭೂ ವಿವಾದದ ತೀರ್ಪು ಪ್ರಕಟಿಸಿದ್ದರು. ಅಷ್ಟೇ ಅಲ್ಲದೆ, ಈಶಾನ್ಯ ಭಾಗದಿಂದ ನ್ಯಾಯಾಂಗದ ಉನ್ನತ ಸ್ಥಾನವನ್ನು ತಲುಪಿದ ಮೊದಲ ವ್ಯಕ್ತಿ ಎಂಬ ಕೀರ್ತಿಗೆ ಗೊಗೋಯ್ ಪಾತ್ರರಾಗಿದ್ದರು.
ರಂಜನ್ ಗೊಗೊಯ್ ಅವರು 2019ರ ನವೆಂಬರ್ 17ರಂದು ನಿವೃತ್ತರಾಗಿದ್ದಾರೆ. 2001ರಲ್ಲಿ ಗುವಾಹಟಿಯ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡು ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದರು. ಬಳಿಕ ಪಂಜಾಬ್ ಹಾಗೂ ಹರಿಯಾಣದ ನ್ಯಾಯಾಂಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.