ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದು, ದೇಶದ ಹಲವು ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.
ನವದೆಹಲಿಯಲ್ಲಿರುವ ಸುಷ್ಮಾ ಸ್ವರಜ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ನಾಯಕರು, ಸುಷ್ಮಾ ಸ್ವರಾಜ್ ಸ್ಮೇಹಿತರು, ಅಭಿಮಾನಿಗಳು, ಬಂಧು ಬಳಗದವರು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.
ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್, ಯೋಗ ಗುರು ಬಾಬಾ ರಾಮ್ ದೇವ್, ಬಿಜೆಪಿ ನಾಯಕಿ ಹೇಮಾ ಮಾಲಿನಿ, ಕೇರಳ ಮಾಜಿ ಮುಖ್ಯಮಂತ್ರಿ ಒಮ್ಮನ್ ಚಾಂಡಿ , ಬಿಎಸ್ಪಿ ನಾಯಕಿ ಮಾಯವತಿ ಸೇರಿದಂತೆ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದ್ದಾರೆ.