ನವದೆಹಲಿ:ಮಹಾಮಾರಿ ಕೊರೊನಾ ವೈರಸ್ ನಡುವೆ ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿದ್ದು, ಇದರ ಬೆನ್ನಲ್ಲೇ ಇಂದು ದೇಶವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.
ಕೆಂಪು ಕೋಟೆ ಮೇಲೆ 7ನೇ ಸಲ ನಮೋ ಭಾಷಣ... ಮೋದಿ ಸ್ವಾತಂತ್ರ್ಯ ದಿನದ ಭಾಷಣಗಳತ್ತ ಒಂದು ನೋಟ!
ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಿಂದಲೇ ಅವರು ಮಾತನಾಡಲಿದ್ದು, ಕೆಲವೊಂದು ಮಹತ್ವದ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. ನಾಳೆ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದು, ಅಲ್ಲಿಂದಲೇ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹಾಮಾರಿ ಕೊರೊನಾ ವೈರಸ್, ಇಂಡೋ-ಚೀನಾ ಸಂಘರ್ಷ, ಶಿಕ್ಷಣ ವ್ಯವಸ್ಥೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಮಾತನಾಡುವ ಸಾಧ್ಯತೆ ದಟ್ಟವಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣ ಆಲ್ ಇಂಡಿಯಾ ರೇಡಿಯೋ, ದೂರದರ್ಶನದಲ್ಲಿ ಪ್ರಸಾರಗೊಳ್ಳಲಿದೆ.