ಕರ್ನಾಟಕ

karnataka

ETV Bharat / bharat

ಕೋವಿಡ್-19: ಹೈ-ಥ್ರೂಪುಟ್ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಿ ಮೋದಿ - ಕೊರೊನಾ ಪರೀಕ್ಷಾ ಸಾಮರ್ಥ್ಯ

ದೇಶದಲ್ಲಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ರೋಗ ಲಕ್ಷಣಗಳ ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಬಲಪಡಿಸಲು ಹೈ-ಥ್ರೂಪುಟ್ ಕೇಂದ್ರಗಳು ಸಹಾಯ ಮಾಡಲಿವೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸಲು ಸಹಕಾರಿ ಆಗಲಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

modi
modi

By

Published : Jul 27, 2020, 8:04 AM IST

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಸೋಮವಾರ ನೋಯ್ಡಾ, ಮುಂಬೈ ಮತ್ತು ಕೋಲ್ಕತ್ತಾ ನಗರಗಳಲ್ಲಿ 'ಹೈ-ಥ್ರೂಪುಟ್' ಕೋವಿಡ್​​ ಪರೀಕ್ಷಾ ಸೌಲಭ್ಯಗಳನ್ನೊಳಗೊಂಡ ಸೌಲಭ್ಯವನ್ನ ವಿಡಿಯೋ ಕಾನ್ಫರೆನ್ಸಿಂಗ್​ ಮೂಲಕ ಉದ್ಘಾಟನೆ ಮಾಡಲಿದ್ದಾರೆ.

ಈ ಸೌಲಭ್ಯಗಳು ದೇಶದಲ್ಲಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸುವುದಲ್ಲದೇ, ರೋಗ ಲಕ್ಷಣಗಳ ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಬಲಪಡಿಸಲು ಈ ಹೈ-ಥ್ರೂಪುಟ್ ಕೇಂದ್ರಗಳು ಸಹಾಯ ಮಾಡುತ್ತವೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸಲು ಸಹಕಾರಿ ಆಗುತ್ತದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ಈ ಉನ್ನತ-ಥ್ರೋಪುಟ್ ಪರೀಕ್ಷಾ ಸೌಲಭ್ಯಗಳನ್ನು ಐಸಿಎಂಆರ್- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕ್ಯಾನ್ಸರ್ ಪ್ರಿವೆನ್ಷನ್ ಅಂಡ್ ರಿಸರ್ಚ್, ನೋಯ್ಡಾದಲ್ಲಿ ಸ್ಥಾಪಿಸಲಾಗಿದೆ. ಇನ್ನೊಂದು ಐಸಿಎಂಆರ್-ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ರಿಪ್ರೊಡಕ್ಟಿವ್ ಹೆಲ್ತ್, ಮುಂಬೈ ಮತ್ತು ಐಸಿಎಂಆರ್-ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕಾಲರಾ ಮತ್ತು ಎಂಟರಿಕ್ ಡಿಸೀಸ್ ಕೇಂದ್ರವನ್ನ ಕೋಲ್ಕತ್ತಾದಲ್ಲಿ ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ದಿನವೊಂದಕ್ಕೆ 10,000 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಬಹುದು ಎಂದು ಪಿಎಂಒ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ABOUT THE AUTHOR

...view details