ನವದೆಹಲಿ:ಕೋವಿಡ್ ವಿರುದ್ಧದ ಹೋರಾಟದ ನಡುವೆ ಭಾರತ ಇಂದು 72ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಸಂಭ್ರಮದಲ್ಲಿರುವ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.
"ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು.. ಜೈ ಹಿಂದ್" ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ. ಗಣರಾಜ್ಯೋತ್ಸವ ಪಥ ಸಂಚಲನಕ್ಕೂ ಮುನ್ನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಲಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಧ್ವಜಾರೋಹಣ ನೆರವೇರಿಸಲಿದ್ದು, ರಾಜಪಥದಲ್ಲಿ ನಡೆಯುವ ಪರೇಡ್ ಅನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ವೀಕ್ಷಿಸಲಿದ್ದಾರೆ.
ಇಂದು ಗಣರಾಜ್ಯೋತ್ಸವ ಆಚರಣೆ ಮಾತ್ರವಲ್ಲ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.