ಕರ್ನಾಟಕ

karnataka

ETV Bharat / bharat

ಕೋವಿಡ್ ರೋಗಿಗಳಿಗೆ ಪ್ರವೇಶ ನಿರಾಕರಿಸುವ ಖಾಸಗಿ ಆಸ್ಪತ್ರೆಗಳಿಗೆ ಕೇಜ್ರಿವಾಲ್ ಎಚ್ಚರಿಕೆ - ನವದೆಹಲಿಯಲ್ಲಿ ಕೊರೊನಾ ಸೋಂಕು

ಬ್ಲಾಕ್​ ಮಾರ್ಕೆಟ್​ನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿನ ಹಾಸಿಗೆಗಳ ಮಾರಾಟವನ್ನು ನಿಲ್ಲಿಸಲು ಮೊಬೈಲ್ ಅಪ್ಲಿಕೇಶನ್ ಪ್ರಾರಂಭಿಸಲಾಗಿದೆ ಎಂದು ನವದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Delhi CM Kejriwal
ಅರವಿಂದ್ ಕೇಜ್ರಿವಾಲ್

By

Published : Jun 6, 2020, 3:09 PM IST

ನವದೆಹಲಿ: ಕೋವಿಡ್ ಸೋಂಕಿತ ರೋಗಿಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ಕೇಜ್ರಿವಾಲ್ ಎಚ್ಚರಿಕೆ

ನವದೆಹಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲವು ಆಸ್ಪತ್ರೆಗಳು ಕೋವಿಡ್ ರೋಗಿಗಳ ಪ್ರವೇಶವನ್ನು ನಿರಾಕರಿಸುತ್ತಿವೆ. ಇತರ ಪಕ್ಷಗಳಿಂದ ತಮ್ಮ ರಕ್ಷಕರ ಪ್ರಭಾವ ಬಳಸಿಕೊಂಡು ಆಸ್ಪತ್ರೆಗಳಲ್ಲಿನ ಹಾಸಿಗೆಗಳನ್ನು ಮಾರಾಟ ಮಾಡಲು ಸಾಧ್ಯವಾಗುತ್ತದೆ ಎಂದು ಭಾವಿಸುವವರನ್ನು ರಕ್ಷಿಸುವ ಮಾತೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಬ್ಲಾಕ್​ ಮಾರ್ಕೆಟ್​ನಲ್ಲಿ ಹಾಸಿಗೆಗಳ ಮಾರಾಟವನ್ನು ನಿಲ್ಲಿಸಲು ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿದೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.

'ನಾವು ನೂತನ ಆ್ಯಪ್​ ಪರಿಚಯಿಸಿದ್ದೇವೆ. ಇದರಿಂದ ಆಸ್ಪತ್ರೆಗಳಲ್ಲಿನ ಹಾಸಿಗೆಗಳು ಮತ್ತು ವೆಂಟಿಲೇಟರ್‌ಗಳ ಸಂಖ್ಯೆಯ ಬಗ್ಗೆ ಸಾರ್ವಜನಿಕರು ತಿಳಿಯಬಹುದು. ಆದರೆ, ಇದರಿಂದ ನಾವೇನೋ ಅಪರಾಧ ಮಾಡಿದಂತೆ ಕೋಲಾಹಲ ಸೃಷ್ಟಿಸಲಾಗುತ್ತಿದೆ' ಎಂದು ಟೀಕಾಕಾರರಿಗೆ ಪ್ರತ್ಯುತ್ತರ ನೀಡಿದರು.

ABOUT THE AUTHOR

...view details