ನವದೆಹಲಿ:ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಫೋನ್ ಹ್ಯಾಕ್ ಆಗಿರಬಹುದು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲ ಶಂಕೆ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಫೋನ್ಗೆ ಹ್ಯಾಕ್ ಆಗಿರುವ ಸಂದೇಶ ಬಂದಿದೆ ಎಂದ ಕಾಂಗ್ರೆಸ್!
ಪ್ರಿಯಾಂಕಾ ಗಾಂಧಿ ಅವರ ಫೋನ್ ಹ್ಯಾಕ್ ಆಗಿರಬಹುದು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲ ಅನುಮಾನ ವ್ಯಕ್ತಪಡಿಸಿದ್ದಾರೆ.
ರಣದೀಪ್ ಸುರ್ಜೆವಾಲ
ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಸಂದೇಶವನ್ನು ವಾಟ್ಸ್ಯಾಪ್ ಹಲವರಿಗೆ ಕಳಿಸುತ್ತಿರುವ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ಸಹ ಸಂದೇಶ ಸ್ವೀಕರಿಸಿದ್ದರು ಎಂದು ಸುರ್ಜೆವಾಲಾ ಹೇಳಿದ್ದಾರೆ.
2019ರ ಸಾರ್ವತ್ರಿಕ ಚುನಾವಣೆ ವೇಳೆ ಸೆಲ್ ಫೋನ್‌ಗಳನ್ನು ಹ್ಯಾಕ್ ಮಾಡಲು ಅಕ್ರಮ ಸ್ಪೈವೇರ್ 'ಪೆಗಾಸಸ್' ಅನ್ನು ಬಳಸಲಾಗುತ್ತಿತ್ತು. ಬಿಜೆಪಿ ಸರ್ಕಾರಕ್ಕೂ ಇದರ ಬಗ್ಗೆ ಸಂಪೂರ್ಣ ಅರಿವಿತ್ತು. ಈ ಬಗ್ಗೆ ಫೇಸ್ಬುಕ್ ಹೇಳಿದ್ದರೂ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸುರ್ಜೆವಾಲ ಆರೋಪಿಸಿದ್ದಾರೆ.