ಕರ್ನಾಟಕ

karnataka

ETV Bharat / bharat

ಸೋನಭದ್ರಾ ಪ್ರಕರಣ... ಮೃತರ ಕುಟುಂಬ ಭೇಟಿಗೆ ಹೊರಟಿದ್ದ ಪ್ರಿಯಾಂಕಾ ವಶಕ್ಕೆ

ಉತ್ತರಪ್ರದೇಶದ ಸೋನಭದ್ರಾ ಜಿಲ್ಲೆಯ ಘೋರಾವಾಲ್​​ನ ಉಬಾ ಗ್ರಾಮದಲ್ಲಿ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರನ್ನು ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಿಯಾಂಕಾ

By

Published : Jul 19, 2019, 1:49 PM IST

Updated : Jul 19, 2019, 2:52 PM IST

ವಾರಣಾಸಿ:ಸೋನಭದ್ರಾ ಗುಂಡಿನ ದಾಳಿ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬದವರನ್ನು ಭೇಟಿ ಮಾಡಲು ಹೊರಟಿದ್ದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭೂವಿವಾದಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಸೋನಭದ್ರಾ ಜಿಲ್ಲೆಯ ಘೋರಾವಾಲ್​​ನ ಉಬಾ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ನಡೆದಿತ್ತು. ಮೂವರು ಮಹಿಳೆಯರು ಸೇರಿದಂತೆ 10 ಮಂದಿಯನ್ನು ಕೊಲ್ಲಲಾಗಿತ್ತು. ಇನ್ನು ಸೋನಭದ್ರಕ್ಕೆ ಪ್ರಿಯಾಂಕಾ ಗಾಂಧಿ ತೆರಳುತ್ತಿದ್ದ ವೇಳೆ ಅವರಿಗೆ ತಡೆಯಲಾಗಿದ್ದು, ನಾರಾಯಣಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಿಯಾಂಕಾ ವಶಕ್ಕೆ

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರಿಯಾಂಕಾ, ನಾನು ಮೃತರ ಕುಟುಂಬದವರನ್ನು ಭೇಟಿ ಮಾಡಲು ಹೊರಟಿದ್ದೆ. ನನ್ನ ಜೊತೆ ಕೇವಲ ನಾಲ್ವರನ್ನು ಕರೆದುಕೊಂಡು ಹೋಗುತ್ತೇನೆ ಎಂದರೂ ಕೂಡ ಅವಕಾಶ ನೀಡುತ್ತಿಲ್ಲ. ಯಾಕೆ ನಮ್ಮನ್ನು ತಡೆಯಲಾಗುತ್ತಿದೆ ಎಂಬುದಕ್ಕೆ ಕಾರಣ ನೀಡಬೇಕು. ನನ್ನನ್ನು ಯಾಕೆ ವಶಕ್ಕೆ ಪಡೆಯಲಾಗಿದೆ, ನಾವು ಎಲ್ಲಿಗೆ ಬೇಕಾದರೂ ಹೋಗಲು ಸಿದ್ದ ಎಂದರು.

ಇನ್ನು ಸೋನಭದ್ರಾದಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿದ್ದು, ಬಿಗಿ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದೆ.

Last Updated : Jul 19, 2019, 2:52 PM IST

For All Latest Updates

TAGGED:

ABOUT THE AUTHOR

...view details