ನವದೆಹಲಿ: ವಲಸೆ ಕಾರ್ಮಿಕರನ್ನು ಉತ್ತರಪ್ರದೇಶದ ಸರ್ಕಾರ ತಮ್ಮ ಮನೆಗಳಿಗೆ ಕಳುಹಿಸಲು ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಲಸೆ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆಯಿಲ್ಲ: ಯುಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಕಿಡಿ - ಯುಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಕಿಡಿ
ವಲಸೆ ಕಾರ್ಮಿಕರನ್ನು ಹಿಂದಿರುಗಿಸಲು ಸರಿಯಾದ ಕೆಲಸವನ್ನ ಒಂದು ತಿಂಗಳ ಹಿಂದೆ ಮಾಡಿದ್ದರೆ, ಕಾರ್ಮಿಕರು ಅಷ್ಟೊಂದು ತೊಂದರೆ ಅನುಭವಿಸುತ್ತಿರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.
ಗಾಜಿಯಾಬಾದ್‌ನ ರಾಮ್‌ಲೀಲಾ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರು ಮನೆಗೆ ಹೋಗಲು ಕಾಯುತ್ತಿದ್ದಾರೆ. ಉತ್ತರ ಪ್ರದೇಶ ಸರ್ಕಾರದಿಂದ ಯಾವುದೇ ವ್ಯವಸ್ಥೆ ಇಲ್ಲ. ಅವರನ್ನು ಹಿಂದಿರುಗಿಸಲು ಸರಿಯಾದ ಕಾರ್ಯವಿಧಾನವನ್ನು ಒಂದು ತಿಂಗಳ ಹಿಂದೆ ಸ್ಥಾಪಿಸಿದ್ದರೆ, ಕಾರ್ಮಿಕರು ಅಷ್ಟೊಂದು ತೊಂದರೆ ಅನುಭವಿಸುತ್ತಿರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ವಲಸೆ ಕಾರ್ಮಿಕರನ್ನು ಅವರವರ ಮನೆಗಳಿಗೆ ಕಳುಹಿಸಲು ಯುಪಿ ಸರ್ಕಾರ ಅನುಮತಿ ನೀಡಿಲ್ಲ. ನಿನ್ನೆ ನಾವು 1,000 ಬಸ್ಗಳನ್ನು ವ್ಯವಸ್ಥೆ ಮಾಡಿದ್ದೆವು. ಯುಪಿ ಸರ್ಕಾರದೊಂದಿಗೆ ಮಾತನಾಡಿದೆವು. ನಾವು ಗಡಿಗಳಿಗೆ ಬಸ್ಗಳನ್ನು ತಂದಾಗ, ಯುಪಿ ಸರ್ಕಾರ ರಾಜಕೀಯ ಮಾಡಲು ಪ್ರಾರಂಭಿಸಿತು ಮತ್ತು ಅನುಮತಿ ಸಹ ನೀಡಲಿಲ್ಲ. ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಸರ್ಕಾರ ಸಿದ್ಧವಾಗಿಲ್ಲ. ಯಾರಾದರೂ ಅವರಿಗೆ ಸಹಾಯ ಮಾಡಲು ಮುಂದಾದರೆ ಅದನ್ನು ಸಹ ನಿರಾಕರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.