ನವದೆಹಲಿ:ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಈ ಕುರಿತು ಟ್ವೀಟ್ ಮಾಡಿರುವ ಅವರು ಉತ್ತರ ಪ್ರದೇಶದ ರೈತರೊಂದಿಗೆ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಸಂಪೂರ್ಣ ಲಾಕ್ಡೌನ್ನಲ್ಲಿ ಹೊಡೆತ ತಿಂದಿರುವ ಸಣ್ಣ ವ್ಯಾಪಾರಿಗಳಿಗೆ ಸಾಲಕ್ಕೆ ಬದಲು ಸಹಾಯ ಬೇಕಿದೆ ಎಂದು ಕಿಡಿಕಾರಿದ್ದಾರೆ.
ಇದರ ಜೊತೆಗೆ ಯೋಗಿ ಸರ್ಕಾರ ಸುಳ್ಳು ಸಿದ್ದಾಂತ ಹರಡಲು ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ವಿವಿಧ ತರಕಾರಿಗಳ ಬೆಲೆಗಳನ್ನು ಟ್ವೀಟ್ನಲ್ಲಿ ಟ್ಯಾಗ್ ಮಾಡಿದ್ದಾರೆ.
ಹಥ್ರಾಸ್ ಪ್ರಕರಣದಲ್ಲಿ ನ್ಯಾಯದ ಭರವಸೆ
ಹಥ್ರಾಸ್ ಪ್ರಕರಣದ ಕುರಿತು ಟ್ವೀಟ್ ಮಾಡಿರುವ ಅವರು ಯುಪಿ ಸರ್ಕಾರ ಹಥ್ರಾಸ್ ಸಂತ್ರಸ್ತೆ ಕುಟುಂಬ ನಿರ್ಲಕ್ಷಿಸುತ್ತಿದೆ ಎಂದಿರುವ ಅವರು ಇಂದು ಸುಪ್ರೀಂಕೋರ್ಟ್ ನೀಡಿದ ತೀರ್ಪು ನ್ಯಾಯದ ಭರವಸೆ ಮೂಡಿಸುತ್ತದೆ ಎಂದು ಟ್ವೀಟ್ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.