ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ಕುಟುಂಬಸ್ಥರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಕೂಟಿಯಲ್ಲಿ ತೆರಳಿದ್ದರು. ಇದೀಗ ಆ ಸ್ಕೂಟಿ ಮಾಲೀಕನಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದಕ್ಕಾಗಿ ಬಂಧನಕ್ಕೊಳಗಾದ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಮತ್ತೋರ್ವ ಪ್ರತಿಭಟನಾಕಾರ ಸದಾಫ್ ಜಾಫರ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಪ್ರಿಯಾಂಕಾ ಗಾಂಧಿ ತೆರಳುತ್ತಿದ್ದರು. ಈ ವೇಳೆ ಪೊಲೀಸರು ಅವರಿಗೆ ತಡೆಯೊಡ್ಡಿದ್ದರು. ಘಟನೆ ವೇಳೆ ಉತ್ತರ ಪ್ರದೇಶದ ಪೊಲೀಸರು ನನ್ನ ಕುತ್ತಿಗೆ ಹಿಡಿದು ನೆಲಕ್ಕೆ ತಳ್ಳಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗಂಭೀರ ಆರೋಪ ಮಾಡಿದ್ದರು.