ನವದೆಹಲಿ:ಅಣ್ಣ-ತಂಗಿಯರ ಬಾಂಧವ್ಯ ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬವನ್ನ ದೇಶಾದ್ಯಂತ ಸಡಗರ-ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ತಮ್ಮ ಅಣ್ಣನಿಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ್ದಾರೆ.
ಪ್ರತಿ ಸಂತೋಷ ಮತ್ತು ದುಃಖದಲ್ಲಿ ನನಗೆ ಬೆನ್ನೆಲುಬು ಆಗಿರುವ ನನ್ನ ಸಹೋದರನಿಂದ ಪ್ರೀತಿ, ಸತ್ಯ ಮತ್ತು ತಾಳ್ಮೆ ಕಲಿತಿದ್ದೇನೆ. ಇಂತಹ ಸಹೋದರನನ್ನು ಹೊಂದಿದ್ದಕ್ಕೆ ನನಗೆ ಹೆಮ್ಮೆ ಇದೆ.