ಪುದುಚೆರಿ: ತಮ್ಮ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ದೃಢವಾಗಿರುವ ಹಿನ್ನೆಲೆ ಕಚೇರಿಯನ್ನು 2 ದಿನಗಳ ಕಾಲ ಬಂದ್ ಮಾಡುವುದಾಗಿ ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಹೇಳಿದ್ದಾರೆ.
ಶಂಕಿತ ವ್ಯಕ್ತಿಯನ್ನು ಶುಕ್ರವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 24 ಗಂಟೆಗಳಲ್ಲಿ ನಡೆದ ಮಾದರಿಗಳ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಆಗಿ ದೃಢಪಟ್ಟಿರುವ 87 ಜನರಲ್ಲಿ ಈ ಸಿಬ್ಬಂದಿಯೂ ಒಬ್ಬರು ಎಂದು ಮುಖ್ಯಮಂತ್ರಿಗಳು ವಿಡಿಯೋ ಸಂದೇಶದ ಮೂಲಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.