ಲೂಧಿಯಾನ್ (ಪಂಜಾಬ್):ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಸಾಹಸಪಟ್ಟು ಹಿಡಿಯುವಲ್ಲಿ ಯಶಸ್ವಿಯಾಗಿದ್ದ ಪೊಲೀಸರು ಇದೀಗ ಸಂಕಷ್ಟಕ್ಕೊಳಗಾದ ಘಟನೆ ಪಂಜಾಬ್ನ ಲೂಧಿಯಾನದಲ್ಲಿ ನಡೆದಿದೆ.
ಕಳ್ಳತನ ಪ್ರಕರಣ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆ ಮೂಲಕ ಹಿಡಿದಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ವೇಳೆ ವಿಪರೀತವಾಗಿ ಕೆಮ್ಮುತ್ತಿದ್ದರು. ಇದನ್ನು ಗಮನಿಸಿದ ನ್ಯಾಯಾಧೀಶರು ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಟೆಸ್ಟ್ ಮಾಡಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಆಸ್ಪತ್ರೆಯಲ್ಲಿ ನಡೆಸಲಾದ ಪರೀಕ್ಷೆಯ ವೇಳೆ ಕಳ್ಳರಿಬ್ಬರಿಗೆ ಕೊರೊನಾ ಇರುವುದು ಕನ್ಫರ್ಮ್ ಆಗಿದೆ. ಇನ್ನು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದ ವೇಳೆ ಓರ್ವ ಕಳ್ಳ ಪರಾರಿಯಾಗಿದ್ದಾನೆ.