ಹೈದರಾಬಾದ್: ಚೀನಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪಂಜಾಬ್ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಶ್ರದ್ಧಾಂಜಲಿ ಸಲ್ಲಿಕೆ ಮಾಡಿದ್ದು, ಇದೇ ವೇಳೆ ವೀರ ಯೋಧರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿವೆ.
ಲಡಾಖ್ನ ಗಲ್ವಾನ್ ಕಣಿವೆ ಭಾಗದಲ್ಲಿ ನಡೆದ ಭಾರತ - ಚೀನಾ ನಡುವಿನ ಸಂಘರ್ಷದಲ್ಲಿ ಹುತಾತ್ಮರಾದ ಪಶ್ಚಿಮ ಬಂಗಾಳದ ಇಬ್ಬರು ಯೋಧರ ಕುಟುಂಬಕ್ಕೆ ಅಲ್ಲಿನ ಸರ್ಕಾರ ತಲಾ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವುದಾಗಿ ತಿಳಿಸಿದೆ.
ಇದೇ ವೇಳೆ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಮ್ಮ ದೇಶದ ಬಗ್ಗೆ ಹೆಮ್ಮೆ ಇದೆ. ನಾವು ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ ಎಂದಿದ್ದು, ಜೂನ್ 19ರಂದು ಪ್ರಧಾನಿ ಮೋದಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.