ಚಂಡೀಗಢ (ಪಂಜಾಬ್) :ಭಾರತ- ಚೀನಾ ನಡುವಿನ ಗಡಿ ಸಂಘರ್ಷದಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ ಸಲೀಮ್ ಖಾನ್ ಹುತಾತ್ಮರಾಗಿದ್ದಾರೆ. ಅವರ ಕುಟುಂಬಕ್ಕೆ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ 50 ಲಕ್ಷ ರೂ. ಪರಿಹಾರ ಮತ್ತು ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಘೋಷಿಸಿದ್ದಾರೆ.
ಲಡಾಖ್‌ನಲ್ಲಿ ಲ್ಯಾನ್ಸ್ ನಾಯಕ ಸಲೀಮ್ ಖಾನ್ ಹುತಾತ್ಮರಾದ ಸುದ್ದಿ ಕೇಳಿ ಬೇಸರವಾಯಿತು. ಅವರು ಪಟಿಯಾಲ ಜಿಲ್ಲೆಯ ಮರ್ದಾಹೇರಿ ಗ್ರಾಮಕ್ಕೆ ಸೇರಿದವರು. ಅವರ ಕುಟುಂಬಕ್ಕೆ ಸಂತಾಪ ತಿಳಿಸುತ್ತೇನೆ. ಇಡೀ ರಾಷ್ಟ್ರ ಕೆಚ್ಚೆದೆಯ ಸೈನಿಕನಿಗೆ ನಮಸ್ಕರಿಸುತ್ತದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.