ಚಂಡೀಗಢ (ಪಂಜಾಬ್):ರಾಜ್ಯದ ಅಮೃತಸರ, ಗುರುದಾಸಪುರ ಹಾಗೂ ತರನ್ ತರನ್ ಜಿಲ್ಲೆಗಳಲ್ಲಿ ವಿಷಪೂರಿತ ಮದ್ಯ ಸೇವನೆ ಮಾಡಿ 21 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಪಂಜಾಬ್‌ನಲ್ಲಿ ವಿಷಪೂರಿತ ಮದ್ಯ ಸೇವಿಸಿ 21 ಜನರು ಸಾವು: ಉನ್ನತ ಮಟ್ಟದ ತನಿಖೆಗೆ ಆದೇಶ - ಅಮರೀಂದರ್ ಸಿಂಗ್
ಪಂಜಾಬ್ನ ವಿವಿಧ ಪ್ರದೇಶಗಳಲ್ಲಿ ಕಳ್ಳಭಟ್ಟಿ ಸೇವಿಸಿ 21 ಜನರು ಸಾವನ್ನಪ್ಪಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಘಟನೆಯ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.
Punjab CM orders probe
ಪ್ರಕರಣದ ನ್ಯಾಯಾಂಗ ತನಿಖೆಗೆ ಜಲಂಧರ್ ವಿಭಾಗದ ಕಮಿಷನರ್ ನೇಮಕ ಮಾಡಲಾಗಿದ್ದು, ಆರೋಪಿಗಳಿಗೆ ಶಿಕ್ಷೆ ಖಚಿತ ಎಂದು ಸಿಎಂ ಎಚ್ಚರಿಸಿದ್ದಾರೆ. ಈ ಘೋರ ದುರಂತ ಬುಧವಾರ ರಾತ್ರಿ ಸಂಭವಿಸಿದ್ದು, ರಾಜ್ಯದಲ್ಲಿ ತಲ್ಲಣ ಉಂಟು ಮಾಡಿದೆ.