ಚಂಡೀಗಢ(ಪಂಜಾಬ್):ಕಳೆದೆರಡು ದಿನಗಳಿಂದ ಪಂಜಾಬ್ನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ರ‍್ಯಾಲಿಯಲ್ಲಿ ಭಾಗಿಯಾಗಿದ್ದ ಪಂಜಾಬ್ ಆರೋಗ್ಯ ಸಚಿವರಿಗೆ ಕೊರೊನಾ ದೃಢಪಟ್ಟಿದೆ.
ರಾಗಾ ರ‍್ಯಾಲಿಯಲ್ಲಿದ್ದ ಪಂಜಾಬ್ ಆರೋಗ್ಯ ಸಚಿವರಿಗೆ ಕೊರೊನಾ... ರಾಹುಲ್ಗೂ ಭೀತಿ!? - ರಾಹುಲ್ಗೆ ಕೊರೊನಾ ಭೀತಿ
ಪಂಜಾಬ್ನಲ್ಲಿ ಕೃಷಿ ಮಸೂದೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರಾಹುಲ್ ಗಾಂಧಿಗೆ ಇದೀಗ ಕೊರೊನಾ ಸೋಂಕು ತಗುಲುವ ಭೀತಿ ಶುರುವಾಗಿದೆ.
ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿದ್ದು ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂಥೆ ಖುದ್ದಾಗಿ ಮಾಹಿತಿ ನೀಡಿದ್ದಾರೆ. ಕೊರೊನಾ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದ ಹೋಂ ಕ್ವಾರಂಟೈನ್ಗೊಳಗಾಗಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ದವರು ತಪಾಸಣೆಗೊಳಗಾಗುವಂತೆ ಮನವಿ ಮಾಡಿದ್ದಾರೆ. ಬೆಳಗ್ಗೆಯಿಂದಲೂ ಜ್ವರದಿಂದ ಬಳಲುತ್ತಿದ್ದ ಕಾರಣ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಈ ವೇಳೆ ವರದಿ ಪಾಸಿಟಿವ್ ಬಂದಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಿನ್ನೆ ನಡೆದ ಖೇತಿ ಬಚಾವೋ ರ‍್ಯಾಲಿಯಲ್ಲಿ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿದ್ದು ಕಾಣಿಸಿಕೊಂಡಿದ್ದರು. ಇದರಲ್ಲಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಇದೀಗ ಅವರಲ್ಲೂ ಕೊರೊನಾ ಸೋಂಕಿನ ಭೀತಿ ಕಾಡಲು ಶುರುವಾಗಿದೆ.