ಚಂಡೀಗಢ(ಪಂಜಾಬ್): ಮಾದಕ ವಸ್ತುಗಳ ತಡೆಗೆ ಪಣತೊಟ್ಟಿರುವ ಪಂಜಾಬ್ ಪೊಲೀಸರಿಂದು ಭರ್ಜರಿ ಬೇಟೆಯಾಡಿದ್ದಾರೆ. ಬರ್ನಾಲಾ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ಖಾಕಿ ಪಡೆ ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
ಪಂಜಾಬ್ ಪೊಲೀಸರ ಭರ್ಜರಿ ಬೇಟೆ: 40 ಕೋಟಿ ರೂ. ಮೌಲ್ಯದ 8 ಕೆಜಿ ಹೆರಾಯಿನ್ ವಶ - ಬರ್ನಾಲಾ ಜಿಲ್ಲೆ
ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
ಪಂಜಾಬ್ ಪೊಲೀಸರ ಭರ್ಜರಿ ಬೇಟೆ; 40 ಕೋಟಿ ಮೌಲ್ಯದ 8 ಕೆಜಿ ಹೆರಾಯಿನ್ ವಶ
ದಾಳಿ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಅಧಿಕಾರಿ ಸಂದೀಪ್ ಸಿಂಗ್ಲಾ, ಬಿಎಸ್ಎಫ್ ಸಹಯೋಗದೊಂದಿಗೆ ಬರ್ನಾಲಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಇದರ ಮಾರುಕಟ್ಟೆ ಮೌಲ್ಯ 40 ಕೋಟಿ ರೂಪಾಯಿ ಎಂದು ಮಾಹಿತಿ ನೀಡಿದ್ದಾರೆ.