ಚಂಡೀಗಡ್: ಕೃಷಿ ರಾಜ್ಯ ಪಂಜಾಬ್ 20 ದಿನಗಳಲ್ಲಿ 100 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹಿಸಿದೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ.
"ನಾವು 100 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹವನ್ನು ಪೂರ್ಣಗೊಳಿಸಿದ್ದೇವೆ" ಅಲ್ಲದೇ ಮುಂದಿನ ದಿನಗಳಲ್ಲಿ ಹೆಚ್ಚುವರಿ 35 ಲಕ್ಷ ಮೆಟ್ರಿಕ್ ಟನ್ ಸಂಗ್ರಹಿಸುವ ನಿರೀಕ್ಷೆಯಿದೆ. ಇದನ್ನು ಸಾಧ್ಯವಾಗಿಸಿದ ರೈತರು ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳನ್ನು ನಾನು ಅಭಿನಂದಿಸುತ್ತೇನೆ" ಎಂದು ಟ್ವಿಟರ್ನಲ್ಲಿ ಅವರು ಬರೆದುಕೊಂಡಿದ್ದಾರೆ.