ನವದೆಹಲಿ:ಸೆಪ್ಟೆಂಬರ್ 10ರಂದು ಐದು ರಫೇಲ್ ಫೈಟರ್ ಜೆಟ್ಗಳು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ನ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಹಾಗೂ ಭಾರತದ ವಾಯುಪಡೆಯ ಉನ್ನತಾಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ನಡೆಯುವ ಈ ಸಮಾರಂಭದ ನಂತರ ಭಾರತ ಹಾಗೂ ಫ್ರಾನ್ಸ್ ನಡುವಿನ ದ್ವಿಪಕ್ಷೀಯ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.