ನವದೆಹಲಿ:ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ, ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿಕಾರಿದ್ದಾರೆ.
CAA ಬಗ್ಗೆ ರಾಹುಲ್, ಪ್ರಿಯಾಂಕಾ ಗಾಂಧಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ: ಶಾ - ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಸುದ್ದಿ
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. ಈ ಮೂಲಕ ಜನರು ಗಲಭೆ ನಡೆಸುವಂತೆ ಪ್ರಚೋದಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿyವರು ಜನರು ಗಲಭೆ ನಡೆಸುವಂತೆ ಪ್ರಚೋದಿಸುತ್ತಿದ್ದಾರೆ ಎಂದು ಶಾ ಆರೋಪಿಸಿದ್ದಾರೆ. ಇದೇ ವೇಳೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಭರವಸೆ ನೀಡಿದ ಶಾ, ಸಿಎಎನಿಂದಾಗಿ ಯಾರೊಬ್ಬರೂ ತಮ್ಮ ನಾಗರಿಕತ್ವ ಕಳೆದುಕೊಳ್ಳುವುದಿಲ್ಲ. ಇದು ನಮ್ಮ ದೇಶದ ಯಾವುದೇ ನಾಗರಿಕರಿಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟ ಪಡಿಸಿದರು.
ಇದೇ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಛಾಟಿ ಬೀಸಿದ ಶಾ, 5 ವರ್ಷಗಳ ಹಿಂದೆ ಕೆಲವರು ಹಲವು ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದರು. ಒಮ್ಮೆ ಜನರನ್ನು ದಾರಿ ತಪ್ಪಿಸಬಹುದು. ಆದರೆ ಪ್ರತಿ ಬಾರಿಯೂ ಅದು ಸಾಧ್ಯವಿಲ್ಲ ಎಂದು ಟಾಂಗ್ ಕೊಟ್ಟರು.
TAGGED:
Amit Shah latest statements