ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕು ದೃಢಪಟ್ಟಿರುವ ಬಗ್ಗೆ ಅವರೇ ಟ್ವಿಟರ್ನಲ್ಲಿ ಬಹಿರಂಗಪಡಿಸಿದ್ದು, ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಅಮಿತ್ ಶಾಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಹಲವಾರು ರಾಜಕೀಯ ಗಣ್ಯರು ಶಾ ಅವರು ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕುರಿತು ಟ್ವೀಟ್ ಮಾಡಿದ್ದು, ಅಮಿತ್ ಶಾ ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.