ಕರ್ನಾಟಕ

karnataka

ETV Bharat / bharat

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರನ್ನು ಕರೆತನ್ನಿ: ರಾಹುಲ್ ಗಾಂಧಿ - ಕೊರೊನಾ ವೈರಸ್ ಲೇಟೆಸ್ಟ್ ನ್ಯೂಸ್

ಮಧ್ಯಪ್ರಾಚ್ಯ ದೇಶಗಳಲ್ಲಿ ವ್ಯವಹಾರಗಳನ್ನು ಸ್ಥಗಿತಗೊಳಿಸುವುದರಿಂದ ಭಾರತೀಯ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದಾರೆ ಅವರನ್ನು ಕರೆತರಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

Rahul Gandhi
ರಾಹುಲ್ ಗಾಂಧಿ

By

Published : Apr 15, 2020, 12:10 PM IST

ನವದೆಹಲಿ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರನ್ನು ಮರಳಿ ಕರೆತರಲು ವಿಮಾನ ವ್ಯವಸ್ಥೆ ಮಾಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಮಧ್ಯಪ್ರಾಚ್ಯದಲ್ಲಿ ವ್ಯವಹಾರಗಳನ್ನು ಸ್ಥಗಿತಗೊಳಿಸುವುದರಿಂದ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕೋವಿಡ್-19 ಬಿಕ್ಕಟ್ಟಿನಿಂದ ಮತ್ತು ಮಧ್ಯಪ್ರಾಚ್ಯದಲ್ಲಿ ವ್ಯವಹಾರಗಳನ್ನು ಸ್ಥಗಿತಗೊಳಿಸಿರುವುದರಿಂದ ಸಾವಿರಾರು ಭಾರತೀಯ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನೆಗೆ ಮರಳಲು ಸಾಧ್ಯವಾಗದೇ ಹತಾಶರಾಗಿದ್ದಾರೆ. ಸಹಾಯದ ಅಗತ್ಯವಿರುವ ನಮ್ಮ ಸಹೋದರ, ಸಹೋದರಿಯರನ್ನು ಕರೆತರಲು ಸರ್ಕಾರವು ವಿಮಾನ ವ್ಯವಸ್ಥೆ ಮಾಡಬೇಕು ಎಂದು ಟ್ವೀಟ್​ ಮಾಡಿದ್ದಾರೆ.

ABOUT THE AUTHOR

...view details