ಕರ್ನಾಟಕ

karnataka

ETV Bharat / bharat

ಸೈನಿಕರು ಚಳಿಯಲ್ಲಿ ಚೀನಾ ಆಕ್ರಮಣ ತಡೆಯುತ್ತಿದ್ದರೆ ಮೋದಿ 8,400 ಕೋಟಿ ರೂ.  ವಿಮಾನದಲ್ಲಿ ಓಡಾಡುತ್ತಿದ್ದಾರೆ: ರಾಗಾ ಟೀಕೆ - rahul gandhi attacks pm modi on border standoff

ಚೀನಾದ ಸೈನಿಕರು ಭಾರತೀಯ ಭೂಪ್ರದೇಶದ ಕೆಲವು ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಮಾಜಿ ಸಂಸದ ಥುಪ್ಸ್ತಾನ್ ಚೆವಾಂಗ್ ಹೇಳಿರುವ ಆರೋಪಗಳನ್ನು ಉಲ್ಲೇಖಿಸಿ ಸುದ್ದಿಯ ಸ್ಕ್ರೀನ್​ಶಾಟ್ ಹಂಚಿಕೊಂಡಿದ್ದಾರೆ. ಚಳಿಗಾಲದಲ್ಲಿ ಭಾರತೀಯ ಸೈನಿಕರು ಸಾಮಾನ್ಯ ಡೇರೆಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

Modi
ಮೋದಿ

By

Published : Oct 30, 2020, 4:52 PM IST

ನವದೆಹಲಿ:ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ದೇಶದ ಸೈನಿಕರು, ಚಳಿಗಾಲದಲ್ಲಿ ಸಾಮಾನ್ಯ ಡೇರೆಗಳಲ್ಲಿ ವಾಸಿಸುತ್ತಿದ್ದರೂ ಚೀನಾದ ಆಕ್ರಮಣದ ವಿರುದ್ಧ ದೃಢವಾಗಿ ನಿಲ್ಲುತ್ತಾರೆ. ದೇಶದ ಪ್ರಧಾನಿ 8,400 ಕೋಟಿ ರೂ. ವಿಮಾನಗಳಲ್ಲಿ ಸಂಚರಿಸುತ್ತಿದ್ದಾರೆ. ಚೀನಾ ಹೆಸರನ್ನು ತೆಗೆದುಕೊಳ್ಳುವ ಭಯದಲ್ಲಿದ್ದಾರೆ. ಯಾರಿಗೆ ಒಳ್ಳೆಯ ದಿನಗಳು ಸಿಕ್ಕವು? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಟ್ವೀಟ್

ಚೀನಾದ ಸೈನಿಕರು ಭಾರತೀಯ ಭೂಪ್ರದೇಶದ ಕೆಲವು ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಮಾಜಿ ಸಂಸದ ಥುಪ್ಸ್ತಾನ್ ಚೆವಾಂಗ್ ಹೇಳಿರುವ ಆರೋಪಗಳನ್ನು ಉಲ್ಲೇಖಿಸಿ ಸುದ್ದಿಯ ಸ್ಕ್ರೀನ್​ಶಾಟ್ ಹಂಚಿಕೊಂಡಿದ್ದಾರೆ. ಚಳಿಗಾಲದಲ್ಲಿ ಭಾರತೀಯ ಸೈನಿಕರು ಸಾಮಾನ್ಯ ಡೇರೆಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

ಕಳೆದ ಆರು ತಿಂಗಳಿಂದ ಭಾರತ ಮತ್ತು ಚೀನಾ ನಡುವೆ ಎಲ್‌ಎಸಿ ಉದ್ವಿಗ್ನತೆ ಅಂತ್ಯಕಾಣದೇ ಮುಂದುವರೆಯುತ್ತಿದೆ. ಈಗಿನ ಉದ್ವಿಗ್ನತೆ ಕಡಿಮೆ ಮಾಡಲು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಉಭಯ ದೇಶಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆಯುತ್ತಿದೆ.

ABOUT THE AUTHOR

...view details