ನವದೆಹಲಿ:ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ಸೋಮವಾರ ನಿಧನರಾಗಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಪ್ರಣಬ್ ದಾ ನಿಧನದ ಸುದ್ದಿಯನ್ನು ದೇಶವೇ ದುಃಖದಿಂದ ಸ್ವೀಕರಿಸುತ್ತಿದೆ: ರಾಗಾ ಸಂತಾಪ - ಸಾವು
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ದುರದೃಷ್ಟಕರ ನಿಧನದ ಸುದ್ದಿಯನ್ನು ದೇಶ ಬಹಳ ದುಃಖದಿಂದ ಸ್ವೀಕರಿಸುತ್ತದೆ. ದೇಶದ ಸಮಸ್ತ ಜನರೊಂದಿಗೆ ನಾನೂ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ದುಃಖಿತಪ್ತ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ದುರದೃಷ್ಟಕರ ನಿಧನದ ಸುದ್ದಿಯನ್ನು ದೇಶ ಬಹಳ ದುಃಖದಿಂದ ಸ್ವೀಕರಿಸುತ್ತದೆ. ದೇಶದ ಸಮಸ್ತ ಜನರೊಂದಿಗೆ ನಾನೂ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ದುಃಖಿತಪ್ತ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಪ್ರಣಬ್ ಅವರನ್ನು ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ವೈರಸ್ ಪಾಸಿಟಿವ್ ಎಂಬುದು ಬಳಿಕ ಗೊತ್ತಾಗಿತ್ತು. ಮುಖರ್ಜಿ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇಂದು ಸಂಜೆ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಅಭಿಜಿತ್ ಮುಖರ್ಜಿ ಖಚಿತಪಡಿಸಿದ್ದಾರೆ.