ವಯನಾಡು: ಭಾರಿ ಮಳೆಯಿಂದ ಈ ಬಾರಿಯೂ ಕೇರಳ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಲ್ಲಿಯವರೆಗೆ 76 ಜನ ಪ್ರಣ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡಿನಲ್ಲೂ ಭಾರಿ ಪ್ರಮಾಣದ ಹಾನಿ ಆಗಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ 2 ದಿನಗಳ ಪ್ರವಾಸ ಕೈಗೊಂಡಿದ್ದು, ಸಂತ್ರಸ್ತರಿಗೆ ಸಾಂತ್ವನ ಹೇಳುತ್ತಿದ್ದಾರೆ. ವಯನಾಡಿನಲ್ಲಿ ಸ್ಥಾಪಿಸಲಾಗಿರುವ ಹಲವು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡುತ್ತಿರುವ ರಾಗಾ, ಅಲ್ಲಿನ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಧೈರ್ಯಗೆಡದಂತೆ ವಿಶ್ವಾಸ ತುಂಬುತ್ತಿದ್ದಾರೆ. ನೆರೆಯಿಂದಾಗಿ ಮನೆ ಮಠ ಕಳೆದುಕೊಂಡು, ಅಪಾಯದಲ್ಲಿದ್ದ ಸಾವಿರಾರು ಮಂದಿಯನ್ನ ಗಂಜಿಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ರಾಹುಲ್ ಮಾಹಿತಿ ನೀಡಿದ್ದಾರೆ.