ನವದೆಹಲಿ: 'ಚೌಕಿದಾರ್ ಚೋರ್ ಹೇ ಎಂದು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ' ಎಂಬ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೋರ್ಟ್ಗೆ ಕ್ಷಮಾಪಣೆ ಪತ್ರ ಸಲ್ಲಿಸಿದರು.
ನ್ಯಾಯಾಂಗ ನಿಂದನೆ ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ರಾಹುಲ್ ಗಾಂಧಿ - etv bhatar
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ನ್ಯಾಯಾಂಗ ನಿಂದನಾತ್ಮಕ ಹೇಳಿಕೆ ನೀಡಿದ್ದರು.
ನ್ಯಾಯಾಂಗ ನಿಂದನೆ ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ರಾಹುಲ್ ಗಾಂಧಿ
ರಫೇಲ್ ಹಗರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿದ ರಾಹುಲ್ ಗಾಂಧಿ 'ಚೌಕೀದಾರ್ ಚೋರ್ ಹೇ' ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್ ಮೇಲೆ ನ್ಯಾಯಾಂಗ ನಿಂದನೆ ಕೇಸ್ ದಾಖಲಾಗಿತ್ತು.
ಇದರ ಸಲುವಾಗಿ ರಾಗಾ ಮೂರು ಪುಟಗಳ ಭೇಷರತ್ ಕ್ಷಮಾಪಣೆ ಪತ್ರವನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
Last Updated : May 8, 2019, 1:38 PM IST