ನವದೆಹಲಿ:ಫ್ರಾನ್ಸ್ನಿಂದ ಐದು ರಫೇಲ್ ಯುದ್ಧ ವಿಮಾನಗಳು ಆಗಮಿಸಿದ್ದು, ಇದಕ್ಕೆ ರಾಹುಲ್ ಗಾಂಧಿ ಇಂಡಿಯನ್ ಏರ್ಪೋರ್ಸ್ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಹರಿಯಾಣದ ಅಂಬಾಲಾ ಏರ್ಬೇಸ್ಗೆ ಮಧ್ಯಾಹ್ನ ಅತ್ಯಾಧುನಿಕ ಯುದ್ಧ ವಿಮಾನಗಳು ಆಗಮಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್ ಸೇರಿದಂತೆ ಅನೇಕರು ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.