ಕರ್ನಾಟಕ

karnataka

ETV Bharat / bharat

ಚೀನೀಯರು ನಮ್ಮ ಭೂಪ್ರದೇಶ ಅತಿಕ್ರಮಿಸಿದ್ದಾರೆ, ಮೋದಿ ಮೌನವಾಗಿದ್ದಾರೆ: ರಾಹುಲ್ ಟೀಕೆ

ಚೀನೀಯರು ಪೂರ್ವ ಲಡಾಖ್‌ನಲ್ಲಿ ನಮ್ಮ ಭೂಭಾಗವನ್ನು ಅತಿಕ್ರಮಿಸಿದ್ದಾರೆ. ಆದರೆ ಪ್ರಧಾನಮಂತ್ರಿ ಈ ವಿಚಾರದಲ್ಲಿ ಸಂಪೂರ್ಣವಾಗಿ ಮೌನವಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

By

Published : Jun 10, 2020, 1:01 PM IST

raul
raul

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚೀನೀಯರು ನಮ್ಮ ಭೂಪ್ರದೇಶವನ್ನು ಅತಿಕ್ರಮಿಸಿದ್ದಾರೆ. ಆದ್ರೆ ಪ್ರಧಾನಿ ಈ ಘಟನೆಯಿಂದ ಕಣ್ಮರೆಯಾಗಿದ್ದಾರೆ ಎಂದು ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಪೂರ್ವ ಲಡಾಖ್‌ನ ಗಡಿ ಪರಿಸ್ಥಿತಿ ಕುರಿತು ರಾಹುಲ್ ಕೇಂದ್ರವನ್ನು ಪ್ರಶ್ನಿಸುತ್ತಿರುವುದು ಇದೇ ಮೊದಲಲ್ಲ. ಲಡಾಖ್‌ನಲ್ಲಿ ಚೀನಾದ ಸೈನ್ಯವು ಭಾರತದ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದೆಯೇ? ಎಂದು ಪ್ರತಿಕ್ರಿಯಿಸಲು ರಾಹುಲ್ ಈ ಹಿಂದೆಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕೇಳಿದ್ದರು.

ಭಾರತ-ಚೀನಾ ಗಡಿ ವಿವಾದವು 3,488 ಕಿ.ಮೀ ಉದ್ದದ ವಾಸ್ತವಿಕ ಗಡಿ ನಿಯಂತ್ರಣ ರೇಖೆಯನ್ನು ಒಳಗೊಂಡಿದೆ. ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳಿಕೊಂಡಿದ್ದು, ಭಾರತ ಇದನ್ನು ಬಲವಾಗಿ ವಿರೋಧಿಸುತ್ತಿದೆ.

ಗಡಿ ಸಮಸ್ಯೆಯ ಅಂತಿಮ ನಿರ್ಣಯ ಬಾಕಿ ಇರುವುದರಿಂದ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡಿಕೊಳ್ಳುವುದು ಅಗತ್ಯ ಎಂದು ಎರಡೂ ಕಡೆಯವರು ಪ್ರತಿಪಾದಿಸುತ್ತಿದ್ದಾರೆ.

ABOUT THE AUTHOR

...view details