ಕರ್ನಾಟಕ

karnataka

ETV Bharat / bharat

ಕೋವಿಡ್​ ಬಿಕ್ಕಟ್ಟಿನ ನಡುವೆ ಪರೀಕ್ಷೆಗಳು ಅಪ್ರಸ್ತುತ: UGC ನಡೆಗೆ ರಾಹುಲ್​ ಗಾಂಧಿ ಕಿಡಿ - ಕೊರೊನಾ ವೈರಸ್​

ಕೊರೊನಾ ಭೀತಿಯ ನಡುವೆಯೂ ಪರೀಕ್ಷೆಗಳನ್ನು ನಡೆಸಲು ಯುಜಿಸಿ ಮುಂದಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ರಾಗಾ, ವಿದ್ಯಾರ್ಥಿಗಳ ಹಿಂದಿನ ಚಟುವಟಿಕೆಗಳ ಆಧಾರದ ಮೇಲೆ ಅವರನ್ನು ಉತ್ತೀರ್ಣರನ್ನಾಗಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

Rahul Gandhi
ರಾಹುಲ್​ ಗಾಂಧಿ

By

Published : Jul 10, 2020, 5:20 PM IST

ನವದೆಹಲಿ:ಕೋವಿಡ್​ ಬಿಕ್ಕಟ್ಟಿನ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನಿರ್ಧಾರ ಹಾಗೂ ಅದರ ಮಾರ್ಗಸೂಚಿಗಳನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರೋಧಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಸಂದೇಶ ನೀಡಿರುವ ರಾಗಾ, ಪರೀಕ್ಷೆಗಳನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಹಿಂದಿನ ಚಟುವಟಿಕೆಗಳ ಆಧಾರದ ಮೇಲೆ ಅವರನ್ನು ಉತ್ತೀರ್ಣರನ್ನಾಗಿ ಮಾಡಬೇಕೆಂದು ಯುಜಿಸಿಗೆ ಆಗ್ರಹಿಸಿದ್ದಾರೆ.

ರಾಹುಲ್​ ಗಾಂಧಿ ವಿಡಿಯೋ ಸಂದೇಶ

ಕೊರೊನಾ ವೈರಸ್​ ಬಹಳಷ್ಟು ಜನರಿಗೆ ಸಮಸ್ಯೆ ತಂದೊಡ್ಡಿದೆ. ಇದರಿಂದಾಗಿ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಐಐಟಿಗಳು ಮತ್ತು ಇತರ ಕಾಲೇಜುಗಳು ಪರೀಕ್ಷೆಗಳನ್ನು ರದ್ದುಗೊಳಿಸಿ ತಮ್ಮ ವಿದ್ಯಾರ್ಥಿಗಳಿಗೆ ಬಡ್ತಿ ನೀಡಿವೆ. ಆದರೆ ಯುಜಿಸಿ ಮಾತ್ರ ಪರೀಕ್ಷೆ ನಡೆಸುವುದಾಗಿ ಹೇಳಿ ಗೊಂದಲವನ್ನು ಸೃಷ್ಟಿಸುತ್ತಿದೆ. ಕೋವಿಡ್​ ಬಿಕ್ಕಟ್ಟಿನ ನಡುವೆ ಪರೀಕ್ಷೆಗಳು ಅಪ್ರಸ್ತುತ. ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರ ದನಿಯನ್ನು ಯುಜಿಸಿ ಕೇಳಬೇಕಿದೆ ಎಂದು ಕೈ ನಾಯಕ ಒತ್ತಾಯಿಸಿದ್ದಾರೆ.

ಸೆಪ್ಟೆಂಬರ್​ನಲ್ಲಿ ಪರೀಕ್ಷೆ ನಡೆಸುವ ಯುಜಿಸಿ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನುಮೋದನೆ ನೀಡಿದೆ. ಈ ಸಂಬಂಧ ಯುಜಿಸಿ ಬಿಡುಗಡೆ ಮಾಡಿದ ಪರಿಷ್ಕೃತ ಮಾರ್ಗಸೂಚಿಗಳ ವಿರುದ್ಧ ರಾಹುಲ್​ ಗಾಂಧಿ 'ಸ್ಪೀಕ್​ ಅಪ್​ ಫಾರ್​ ಸ್ಟುಡೆಂಟ್ಸ್'​ (#SpeakUpForStudents) ಎಂಬ ಅಭಿಯಾನ ಆರಂಭಿಸಿದ್ದು, ಅದರ ಭಾಗವಾಗಿ ಈ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವಿದ್ಯಾರ್ಥಿಗಳು ಪರೀಕ್ಷೆ ರದ್ದು ಮಾಡುವಂತೆ, ಮುಂದಿನ 6 ತಿಂಗಳವರೆಗೆ ತಮ್ಮ ಶುಲ್ಕವನ್ನು ಮನ್ನಾ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.

ABOUT THE AUTHOR

...view details