ನವದೆಹಲಿ: ಕಣಿವೆಯಲ್ಲಿನ ಜೀವನದ ಅದ್ಭುತ ಚಿತ್ರಗಳಿಗಾಗಿ 2020ರ ಪುಲಿಟ್ಜರ್ ಪ್ರಶಸ್ತಿ ಪಡೆದ ಜಮ್ಮು ಮತ್ತು ಕಾಶ್ಮೀರದ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಜೀವನದ ಕುರಿತ ಚಿತ್ರಗಳಿಗಾಗಿ ಪುಲಿಟ್ಜರ್ ಪ್ರಶಸ್ತಿ ಪಡೆದ ಭಾರತೀಯ ಫೋಟೋ ಜರ್ನಲಿಸ್ಟ್‌ಗಳಾದ ದಾರ್ ಯಾಸಿನ್, ಮುಖ್ತಾರ್ ಖಾನ್ ಮತ್ತು ಚನ್ನಿ ಆನಂದ್ ಅವರಿಗೆ ಅಭಿನಂದನೆಗಳು. ನಿಮ್ಮ ಬಗ್ಗೆ ಹಮ್ಮೆ ಎನಿಸುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.