ತಿರುವನಂತಪುರಂ (ಕೇರಳ):ಕಾಂಗ್ರೆಸ್ ಮೃದು ಹಿಂದುತ್ವವನ್ನು ಅಳವಡಿಸಿಕೊಳ್ಳಲು ಹೆಸರುವಾಸಿಯಾಗಿದ್ದು, ರಾಮಮಂದಿರ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹೊಸದಾಗಿ ಏನನ್ನೂ ಟೀಕಿಸಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸದ ವೇಳೆ ಪ್ರತಿಕ್ರಿಯೆ ನೀಡಿದ್ದ ಪ್ರಿಯಾಂಕಾ ಗಾಂಧಿ ಇದು ದೇಶದಲ್ಲಿ ಏಕತೆಯನ್ನು ಹೆಚ್ಚಿಸುತ್ತದೆ ಎಂಬ ಭರವಸೆಯಿದೆ ಎಂದಿದ್ದರು. ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಿಯಾಂಕಾ ಹೇಳಿಕೆ ಬಗ್ಗೆ ನನಗೆ ಆಶ್ಚರ್ಯವಿಲ್ಲ. ರಾಜೀವ್ ಗಾಂಧಿ, ನರಸಿಂಹ ರಾವ್ ಇದ್ದಾಗಲೂ ಕಾಂಗ್ರೆಸ್ ಇದೇ ಧೋರಣೆಯನ್ನು ಅನುಸರಿಸಿತ್ತು ಎಂದು ವ್ಯಂಗ್ಯವಾಡಿದ್ದಾರೆ.