ಲಕ್ನೋ(ಉತ್ತರ ಪ್ರದೇಶ): ಹಥ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಾಜಕೀಯ ಮಾಡ್ತಿದ್ದಾರೆ ಎಂದು ಯುಪಿ ಸಚಿವ ಸಿದ್ದಾರ್ಥ್ ನಾಥ್ ಸಿಂಗ್ ಆರೋಪಿಸಿದ್ದಾರೆ.
ಈ ಹಿಂದೆ ರಾಜಸ್ಥಾನದಲ್ಲಿ ಇಂತಹ ಘಟನೆ ನಡೆದಾಗ ಕಾಂಗ್ರೆಸ್ ಮುಖಂಡರು ಅಲ್ಲಿಗೆ ಯಾಕೆ ಭೇಟಿ ನೀಡಲಿಲ್ಲ. ಆ ವೇಳೆ ಸೋನಿಯಾ ಗಾಂಧಿ ಕೂಡ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇದೀಗ ಹಥ್ರಾಸ್ ಪ್ರಕರಣದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹೇಳಿಕೆ ಬದಲಿಸಲು ಹಥ್ರಾಸ್ ಸಂತ್ರಸ್ತೆ ಕುಟುಂಬಕ್ಕೆ ಜಿಲ್ಲಾಧಿಕಾರಿ ಬೆದರಿಕೆ?: ವಿಡಿಯೋ
ರಾಜಸ್ಥಾನದಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿರುವ ಸುದ್ದಿ ಬಿತ್ತರಗೊಂಡಿವೆ. ಆದರೆ ಅಲ್ಲಿನ ಪೊಲೀಸರು ರೇಪ್ ನಡೆದಿಲ್ಲ ಎಂದು ಮಾಹಿತಿ ನೀಡಿ, ಪ್ರಕರಣ ಮುಚ್ಚಿ ಹಾಕಿದ್ದಾರೆ ಎಂದು ಇದೇ ವೇಳೆ ಆರೋಪಿಸಿದ್ದಾರೆ.
ಹಥ್ರಾಸ್ನಲ್ಲಿ ನಡೆದಿರುವ ಘಟನೆ ನಿಜಕ್ಕೂ ದುರದೃಷ್ಟಕರ. ಸಂತ್ರಸ್ತೆ ಕುಟುಂಬ ಈಗಾಗಲೇ ಸಿಎಂ ಜತೆ ಮಾತನಾಡಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದೆ. ಸರ್ಕಾರ ಕೂಡ ಇದೇ ಕೆಲಸದಲ್ಲಿದ್ದು, ಈಗಾಗಲೇ ಪ್ರಕರಣವನ್ನ ಎಸ್ಐಟಿಗೆ ವಹಿಸಲಾಗಿದೆ ಎಂದಿದ್ದಾರೆ.
ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದ್ದು, ಒಂದು ಮನೆ ಹಾಗೂ ಕುಟುಂಬಸ್ಥರಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಈ ಘಟನೆಯಲ್ಲಿ ರಾಜಕೀಯ ಬಿಟ್ಟು ಬೇರೆ ಏನು ಮಾಡ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.