ಕರ್ನಾಟಕ

karnataka

ETV Bharat / bharat

ರಾಯಗಢ ಕಟ್ಟಡ ಕುಸಿತ: ಮೃತರ ಸಂಖ್ಯೆ 10ಕ್ಕೆ ಏರಿಕೆ.. - ಪಿಎಂ ಮೋದಿ

ಮಹಾರಾಷ್ಟ್ರದ ರಾಯಗಢದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಇನ್ನೂ 15 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಈ ಘಟನೆ ಕುರಿತು ಪ್ರಧಾನಿ ಮೋದಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.

Raigad building collapse
ರಾಯಗಢ ಕಟ್ಟಡ ಕುಸಿತ

By

Published : Aug 25, 2020, 12:06 PM IST

Updated : Aug 25, 2020, 5:04 PM IST

ರಾಯಗಢ:ಅವಶೇಷಗಳಡಿಯಿಂದ ಮತ್ತೆ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮಹಾರಾಷ್ಟ್ರದ ರಾಯಗಢದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ರಾಯಗಢ ಕಟ್ಟಡ ಕುಸಿತ

ಸೋಮವಾರ ಸಂಜೆ ರಾಯಗಢ ಜಿಲ್ಲೆಯ ಮಹಾದ್ ಪ್ರದೇಶದಲ್ಲಿರುವ ಐದು ಅಂತಸ್ತಿನ ಅತಿ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿತ್ತು. ಈವರೆಗೆ 60ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಮೂರು ಎನ್‌ಡಿಆರ್‌ಎಫ್ ತಂಡಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ರಾಹುಲ್​​ ಗಾಂಧಿ ಟ್ವೀಟ್​

ಘಟನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮವರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲೆಂದು ನಾನು ಪ್ರಾರ್ಥಿಸುತ್ತೇನೆ. ಸ್ಥಳೀಯ ಅಧಿಕಾರಿಗಳು ಮತ್ತು ಎನ್‌ಡಿಆರ್‌ಎಫ್ ತಂಡಗಳು ಘಟನಾ ಸ್ಥಳದಲ್ಲಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯಗಳನ್ನು ಮಾಡುತ್ತೇವೆ ಎಂದು ಪಿಎಂ ಮೋದಿ ಟ್ವೀಟ್​ ಮಾಡಿದ್ದಾರೆ.

Last Updated : Aug 25, 2020, 5:04 PM IST

ABOUT THE AUTHOR

...view details