ನವದೆಹಲಿ:ಮಹಾರಾಷ್ಟ್ರದ ಔರಂಗಾಬಾದ್ನಿಂದ ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ 16 ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಸಂಭವಿಸಿದ ಸಾವುನೋವಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕರ ಪ್ರಾಣಹಾನಿ ದುಃಖ ತರಿಸಿದೆ. ಘಟನೆ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಎಲ್ಲ ರೀತಿಯ ಸಹಕಾರ ನೀಡಲಾಗುವುದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.