ನವದೆಹಲಿ: ದಕ್ಷಿಣ ಭಾರತದಲ್ಲಿ ಅಬ್ಬರಿಸಿ ಹಲವರ ಬಲಿ ಪಡೆದಿದ್ದ ಮಳೆ ಇದೀಗ ಉತ್ತರ ಭಾರತದಲ್ಲೂ ಇಪ್ಪತ್ತಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ.
ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್ ರಾಜ್ಯಗಳಲ್ಲಿ ಮಳೆ ಬಿರುಸು ಪಡೆದಿದ್ದರೆ, ದೆಹಲಿ ಹಾಗೂ ಹರಿಯಾಣದಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಭೀಕರ ಮಳೆಗೆ ಒಟ್ಟಾರೆ 28 ಮಂದಿ ಸಾವನ್ನಪ್ಪಿದ್ದು, 20 ಮಂದಿ ನಾಪತ್ತೆಯಾಗಿದ್ದಾರೆ.
ಯಮುನಾ ನದಿಯ ಹರಿವು ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಹರಿಯಾಣದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮತ್ತೊಂದೆಡೆ ಗಂಗಾ ನದಿ ಸಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಹಿಮಾಚಲ ಪ್ರದೇಶದಲ್ಲಿ ಮಳೆ ರುದ್ರ ನರ್ತನ ಮಾಡುತ್ತಿದ್ದು, ಸೇತುವೆ ಹಾಗೂ ರಸ್ತೆಗಳು ಕೊಚ್ಚಿ ಹೋಗಿವೆ. ಭೂ ಕುಸಿತಕ್ಕೆ ಹಿಮಾಚಲ ಪ್ರದೇಶದ ಹಲವೆಡೆ ರಸ್ತೆ ಹಾಗೂ ರೈಲು ಸಂಚಾರಕ್ಕೆ ತೊಡಕುಂಟಾಗಿದೆ.
ಮಳೆಯ ಅಬ್ಬರಕ್ಕೆ ಹಿಮಾಚಲ ಪ್ರದೇಶದಲ್ಲಿ ಕೊಚ್ಚಿ ಹೋದ ರಸ್ತೆ
ಪಂಜಾಬ್ನಲ್ಲಿ ಮನೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಂಜಾಬ್ನಲ್ಲಿ ಪ್ರವಾಹಪೀಡಿತ ಗುರದಾಸ್ಪುರ ಗ್ರಾಮದಲ್ಲಿ ಹನ್ನೊಂದು ಮಂದಿಯನ್ನು ರಕ್ಷಣೆ ಮಾಡಲಾಗಿದೆ.