ಜೈಪುರ (ರಾಜಸ್ಥಾನ): ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲಾ ಹಳ್ಳಿಗಳಲ್ಲಿ ಜನವರಿ 5 ರಿಂದ ಒಂದು ವಾರ 'ಕಿಸಾನ್ ಬಚಾವೊ-ದೇಶ್ ಬಚಾವೊ' ಅಭಿಯಾನವನ್ನು ನಡೆಸಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.
ಸಚಿವರು, ಶಾಸಕರು ಮತ್ತು ಇತರ ಜನ ಪ್ರತಿನಿಧಿಗಳು ಅಭಿಯಾನದಲ್ಲಿ ಭಾಗವಹಿಸಲಿದ್ದು, ಅಭಿಯಾನದ ವೇಳೆ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಲಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ರಾತ್ರಿ ನಡೆದ ಕೌಂನ್ಸಿಲ್ ಆಫ್ ಮಿನಿಸ್ಟರ್ಸ್ ಸಭೆಯಲ್ಲಿ ಈ ಅಭಿಯಾನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಜನವರಿ 3 ರಂದು ರಾಜ್ಯಾದ್ಯಂತ ಧರಣಿ ನಡೆಸಲಿದ್ದಾರೆ. ಈ ಮೂಲಕ ಪ್ರತಿಭಟನಾ ನಿರತ ರೈತರಿಗೆ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲಿವೆ ಎಂದು ಮೂಲಗಳು ತಿಳಿಸಿವೆ.
ಓದಿರಾಜ್ಕೋಟ್ನಲ್ಲಿ ಏಮ್ಸ್ ನಿರ್ಮಾಣಕ್ಕೆ ಇಂದು ಪ್ರಧಾನಿ ಮೋದಿಯಿಂದ ಅಡಿಗಲ್ಲು
ಸಭೆಯಲ್ಲಿ, ರೈತರಿಗೆ ವಿದ್ಯುತ್, ಬಜೆಟ್ ಸಿದ್ಧತೆ, ಮೂರು ವಿಧಾನಸಭೆಗಳಲ್ಲಿ ಮುಂಬರುವ ಉಪಚುನಾವಣೆಗಳ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಅಲ್ಲದೆ 2021 ರಲ್ಲಿ ಯಾವ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಗುರುತಿಸಲು ಸಚಿವರಿಗೆ ತಿಳಿಸಲಾಗಿದೆ.