ಜೈಪುರ(ರಾಜಸ್ಥಾನ): ಲಾಕ್ಡೌನ್ ಅವಧಿಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬ ಸದಸ್ಯರ ಚಿತಾ ಭಸ್ಮವನ್ನು ವಿಸರ್ಜನೆ ಮಾಡಲು ಜನರಿಗೆ ಅನುಕೂಲವಾಗುವಂತೆ ವಿಶೇಷ ಬಸ್‌ಗಳನ್ನು ಓಡಿಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಚಿತಾ ಭಸ್ಮ ವಿಸರ್ಜನೆಗೆ ವಿಶೇಷ ಬಸ್ ವ್ಯವಸ್ಥೆ: ರಾಜಸ್ಥಾನ ಸರ್ಕಾರ ನಿರ್ಧಾರ - ಅಶೋಕ್ ಗೆಹ್ಲೋಟ್ ಲೇಟೆಸ್ಟ್ ನ್ಯೂಸ್
ಚಿತಾ ಭಸ್ಮವನ್ನು ವಿಸರ್ಜನೆ ಮಾಡಲು ಜನರಿಗೆ ಅನುಕೂಲವಾಗುವಂತೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲು ರಾಜಸ್ಥಾನ ಸರ್ಕಾರ ತೀರ್ಮಾನಿಸಿದೆ.
ಬಸ್‌ಗಳ ಕಾರ್ಯಾಚರಣೆಗೆ ಒಪ್ಪಿಗೆ ನೀಡುವಂತೆ ಉತ್ತರಾಖಂಡ್ ಮತ್ತು ಉತ್ತರ ಪ್ರದೇಶ ಸರ್ಕಾರಗಳೊಂದಿಗೆ ಮಾತುಕತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಗೆಹ್ಲೋಟ್, ಲಾಕ್ಡೌನ್ ಕಾರಣ ಕುಟುಂಬ ಸದಸ್ಯರ ಮರಣದ ನಂತರ ಚಿತಾ ಭಸ್ಮವನ್ನು ವಿಸರ್ಜಿಸಲು ಹೋಗದಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿಯಾಗಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಬಸ್‌ಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದ್ದಾರೆ.
ಇತರ ರಾಜ್ಯಗಳಿಂದ ಬರುವ ವಲಸಿಗರ ಕ್ವಾರಂಟೈನ್ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು. ಜಿಲ್ಲಾ ಮಟ್ಟದಲ್ಲಿ ಹಿರಿಯ ಅಧಿಕಾರಿಗಳು ನಿರಂತರವಾಗಿ ಸಾಂಸ್ಥಿಕ ಮತ್ತು ಹೋಂ ಕ್ವಾರಂಟೈನ್ ಬಗ್ಗೆ ಜಾಗೃತರಾಗಿರಬೇಕು ಎಂದಿದ್ದಾರೆ. ರಾಜಸ್ಥಾನದಲ್ಲಿ ಸದ್ಯ 7 ಲಕ್ಷಕ್ಕೂ ಅಧಿಕ ಮಂದಿಯನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ. ಈ ಪೈಕಿ 34 ಸಾವಿರ ಜನರು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇದ್ದರೆ, ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.